ಕೆನ್ನಾಳು : ಶಾಲೆ ಮಗ್ಗುಲಲ್ಲೇ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದರೂ ದುರಸ್ತಿಗೆ ಮುಂದಾಗದ ಪಿಡಿಒ ಶ್ರೀನಿವಾಸ್

ವರದಿ-ವಿಶ್ವನಾಥ್, ಪಾಂಡವಪುರ

ಪಾಂಡವಪುರ : ತಾಲ್ಲೂಕಿನ ಕೆನ್ನಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಪಕ್ಕದ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದರೂ ಪಂಚಾಯ್ತಿ ಅಭಿವೃದ್ಧಿ ಶ್ರೀನಿವಾಸ್ ದುರಸ್ತಿಗೆ ಮುಂದಾಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ನೀರು ರಸ್ತೆಯಲ್ಲಿ ಹರಿಯುತ್ತಿರುವ ಕಾರಣ ಗುಂಡಿಬಿದ್ದು ರಸ್ತೆಯಲ್ಲಾ ಕೆಸರುಮಯವಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಮತ್ತು ರಸ್ತೆಯಲ್ಲಿ ತಿರುಗಾಡುವ ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು, ನೀರು ನಿಂತಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಮಿಕ ರೋಗ ಹರಡುವ ಭೀತಿ ಇರುವ ಕಾರಣ ಕೂಡಲೇ ನೀರು ನಿಲ್ಲಿಸಿ ಇಲ್ಲವೇ ಪೈಪ್ ದುರಸ್ತಿ ಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. 

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು