ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ


 ಮೈಸೂರು : ನಾಡಹಬ್ಬ ಮೈಸೂರು ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಸೋಮವಾರ ಉದ್ಘಾಟಿಸಿದರು.

ಕುಪ್ಪಣ್ಣ ಪಾರ್ಕ್‍ನ ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ ಪುಷ್ಪಗಳಿಂದ ಅಲಂಕರಿಸಿರುವ ಹೂವಿನ ಕುಂಡಗಳು, ವಿಶೇಷ ಪ್ರಭೇದದ ಸಸ್ಯಗಳನ್ನು ಸಚಿವರು, ಅಧಿಕಾರಿಗಳು ಮತ್ತು ಇನ್ನಿತರ ಮುಖಂಡರೊಂದಿಗೆ ವೀಕ್ಷಿಸಿದರು. 

ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.