ಪಾಂಡವಪುರ : ಬಿಜೆಪಿ ಮುಖಂಡ ಎನ್.ಎಸ್.ಇಂದ್ರೇಶ್ ನೇತೃತ್ವದಲ್ಲಿ ತಾಲ್ಲೂಕಿನ ನಾರಾಯಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಮಹಳ್ಳಿ ಮತ್ತು ಸಿಂಗಾಪುರ ಗ್ರಾಮದ ರೈತಸಂಘ ಮತ್ತು ಜೆಡಿಎಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸೇರ್ಪಡೆಗೊಂಡ ಮುಖಂಡರು ಮಾತನಾಡಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಖಂಡರಾದ ಎನ್.ಎಸ್.ಇಂದ್ರೇಶ್ ಅವರ ಸಮಾಜ ಸೇವೆಯನ್ನು ಮೆಚ್ಚಿ, ಭಾರತೀಯ ಜನತಾ ಪಾರ್ಟಿಯ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು.
0 ಕಾಮೆಂಟ್‌ಗಳು