ಪಾಂಡವಪುರ : ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಪಾಂಡವಪುರದಲ್ಲಿ ನಡೆದಿದೆ.
ಪಟ್ಟಣದ ಸುಬ್ರಹ್ಮಣ್ಯ ದೇವಾಲಯದ ರಸ್ತೆಯಲ್ಲಿ ವಾಸಿಸುತ್ತಿರುವ ಟೈಲರ್ ಸಿದ್ದರಾಮು ಎಂಬವರ ಮಗ ಅಭಿಷೇಕ್ (೩೦) ಮೃತ ಯುವಕ.ಮೈಸೂರಿನ ಜೆ.ಕೆ.ಟರ‍್ಸ್ ಉದ್ಯೋಗಿಯಾಗಿರುವ ಅಭಿಷೇಕ್ ಗುರುವಾರ ಬೆಳಿಗ್ಗೆ ತನ್ನ ಗೆಳೆಯನ ಜತೆ ಬೈಕ್‌ನಲ್ಲಿ ಹರಳಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಪಾಂಡವಪುರ ಸಮೀಪದ ಪೆಟ್ರೋಲ್ ಬಂಕ್ ಹತ್ತಿರ ಟೆಂಪೋ ಬೈಕ್‌ಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಅಭಿಷೇಕ್‌ನನ್ನು ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟನು. ಅಭಿಷೇಕ್ ಜತೆಗಿದ್ದ ಇನ್ನೂ ಇಬ್ಬರು ಯುವಕರು ಗಾಯಗೊಂಡಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗುರುವಾರ ಸಂಜೆ ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಯುವಕನ ಶವ ಪರೀಕ್ಷೆ ನಡೆಯಿತು. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು