ದಿವಂಗತ ಉಮೇಶ್ ಕತ್ತಿ ಮನೆಗೆ ಶಾಸಕ ಜಿ.ಟಿ.ದೇವೇಗೌಡ ಭೇಟಿ, ಸಾಂತ್ವಾನ


 ಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು, ಇತ್ತೀಚಿಗೆ ನಿಧನ ಹೊಂದಿದ ಸಚಿವ ದಿವಂಗತ ಉಮೇಶ್ ಕತ್ತಿ ರವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಯ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮರಮ್ಕಲ್, ರಾಮಚಂದ್ರಗೌಡ, ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಜಗದೀಶ್ ಕವಟಗಿ ಮಠ ಹಾಗೂ ಇನ್ನಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು