ದೇಶದಲ್ಲಿ ರೈತರು ಸಾಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಚಿರತೆಗಳ ಜತೆ ಫೋಟೋ ಶೂಟ್ : ನಳಪಾಡ್ ಬೇಸರ

ಮಾರ್ಟಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಹಮ್ಮದ್ ನಳಪಾಡ್‍ಗೆ ಅದ್ಧೂರಿ ಸ್ವಾಗತ

ವರದಿ-ಹನೂರು ಶಾರೂಖ್ ಖಾನ್
ಹನೂರು : ರಾಜ್ಯ ಹಾಗೂ ರಾಷ್ಟ್ರದಲ್ಲಿ ಮಳೆ ಹಾನಿಯಿಂದ ಅತಿವೃಷ್ಟಿ ಅನಾವೃಷ್ಟಿಯಿಂದ ಬೆಳೆ ಹಾನಿ ಜೀವಹಾನಿ ಆಗಿದ್ದರೂ ಸಹ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿದೇಶದಿಂದ ತರಲಾದ ಚಿರತೆಗಳನ್ನು ಕಾಡಿಗೆ ಬಿಡುವ ಸಂದರ್ಭದಲ್ಲಿ ಫೋಟೋ ಶೂಟ್ ಮಾಡ್ಕೊಂಡ್ ಪೋಜು ಕೊಡುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಮಹಮದ್ ನಲಪಾಡ್ ರವರು ಹೇಳಿದರು.
ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದಲ್ಲಿ ರಾಮಾಪುರ ಹಾಗೂ ಹನೂರು ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಚಾಮರಾಜನಗರ ಜಿಲ್ಲೆಗೆ 30ನೇ ತಾರೀಕು ಭಾರತ್ ಚೋಡೋ ಕಾರ್ಯಕ್ರಮದ ಅಂಗವಾಗಿ ಬರುವ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬರಬೇಕು ಪ್ರಧಾನಿ ನರೇಂದ್ರ ಮೋದಿಯವರು ನಾನು ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕುಟುಂಬಕ್ಕೆ ಹದಿನೈದು ಲಕ್ಷ ಹಣ ಕೊಡುತ್ತೇನೆ. ವರ್ಷಕ್ಕೆರಡು ಕೋಟಿ ಉದ್ಯೋಗ ನೀಡುತ್ತೇನೆ. ಎಂಬಿತ್ಯಾದಿ ಹತ್ತಾರು ಭರವಸೆಯನ್ನು ನೀಡಿದ್ದರು. ಆದರೆ ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲರಾಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ದುಬಾರಿಯಾಗಿ ಜನ ವಿಲವಿಲ ಒದ್ದಾಡುತ್ತಿದ್ದಾರೆ. ಯಾವ ವ್ಯಕ್ತಿಯ ಖಾತೆಗೂ ಹದಿನೈದು ಲಕ್ಷ ಹಣ ಬಂದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜನಪರ  ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದೇ ಬರುತ್ತೆ. ಹಾಗೂ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದರು. 
ಆದ್ದರಿಂದ ಎಲ್ಲಾ ಕಾಂಗ್ರೆಸ್ ಯೂತ್ ಪದಾಧಿಕಾರಿಗಳು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಕಿವಿಮಾತು ಹೇಳಿದರು ಇದೇ ಸಂದರ್ಭದಲ್ಲಿ ರಾಮಪುರ. ಹಾಗೂ ಹನೂರು. ಭಾಗದ ಯೂತ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಹಾಗೂ ಮಾದೇಶ್. ರಾಮಪುರ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷರಾದ ರಾಮಲಿಂಗಂ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಿ ಶಿವ. ಉಪಾಧ್ಯಕ್ಷರಾದ ರಾಮಲಿಂಗಂ. ಕಾಂಗ್ರೆಸ್ ಮುಖಂಡರುಗಳಾದ ಮಣಿ. ತಂಬಿ. ಜಪಮಾಲೆ. ಹಾಗೂ ಇನ್ನಿತರರು ಹಾಜರಿದ್ದರು.
ಇದಕ್ಕೂ ಮೊದಲು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಾರ್ಟಳ್ಳಿ ಮುಖ್ಯರಸ್ತೆಯಿಂದ ವಾದ್ಯ ಮೇಳಗಳ ಜೊತೆ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ನಲಪಾಡ್ ರವರನ್ನು ಅದ್ದೂರಿಯಾಗಿ ಮೆರವಣಿಗೆ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯಿತು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು