ಶಾಗ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

 

ವರದಿ-ಹನೂರು ಶಾರೂಖ್ ಖಾನ್

ಹನೂರು : ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಗ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಜರುಗಿತು. 
ಹನೂರು ತಾಲೂಕಿನ ಶಾಗ್ಯ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ 2022ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ರುದ್ರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರತಿಭಾ ಕಾರಂಜಿಯಂತಹ ವೇದಿಕೆಗಳ ಮೂಲಕ ಹೊರ ಚೆಲ್ಲಬೇಕು, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಗುರುತರ ಜವಾಬ್ಧಾರಿ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ ವಿವಿಧ ಶಾಲೆಯ ವಿದ್ಯಾರ್ಥಿಗಳು ನೃತ್ಯ, ಭರತನಾಟ್ಯ, ಮಿಮಿಕ್ರಿ, ಹಾಸ್ಯ, ಸಂಂಸ್ಕøತಿಕ, ರಸಪ್ರಶ್ನೆ, ಕಂಠಪಾಠ, ರಂಗೋಲಿ ಸ್ವರ್ಧೆ, ಭಾಷಣ ಸ್ವರ್ಧೆ, ಜಾನಪದ ಗೀತೆ, ಭಾವಗೀತೆ, ಛದ್ಮವೇಷ, ಮತ್ತಿತರ ಕಲೆಗಳನ್ನು ಅನಾವಣಗೊಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು