ಸಂಗ್ರಹ ಚಿತ್ರ
ವರದಿ-ಶಾರೂಖ್ ಖಾನ್, ಹನೂರು
ಹನೂರು : ಮಹಾಲಯ ಅಮಾವಾಸ್ಯೆ ಜಾತ್ರೆ ಹಾಗೂ ದಸರಾ ಮಹೋತ್ಸವದ ಪ್ರಯುಕ್ತ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಮಲೈಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಾಧಿಕಾರ ಸಿದ್ಧತೆ ನಡೆಸಿದೆ.
ಜಾತ್ರೆ ವಿಶೇಷವಾಗಿ ಮಹದೇಶ್ವರನ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಾಹನಗಳ ಪಾಕಿರ್ಂಗ್, ಹಾಗೂ ಲಾಡು ಕೌಂಟರ್ ವ್ಯವಸ್ಥೆ ಮಾಡಲಾಗುತ್ತಿದೆ.
ತಮಿಳುನಾಡು ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಸಕಲ ಸಿದ್ಧತೆ ನೆಡೆಯುತ್ತಿದೆ.
ಇಂದಿನಿಂದ ಮಹಾಲಯ ಅಮವಾಸ್ಯೆ ಜಾತ್ರಾ ಪ್ರಾರಂಭ ನಾಳೆ ಸೆ.24 ರಂದು ಸ್ವಾಮಿಗೆ ಎಣ್ಣೆ ಮಜ್ಜನ. ಸೆ.25 ರಂದು ವಿಶೇಷ ಸೇವೆ ಉತ್ಸವ ಕಾರ್ಯ. ಬಳಿಕ ದಸರಾ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ.
0 ಕಾಮೆಂಟ್‌ಗಳು