ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸೋಮವಾರ "ಆರೋಗ್ಯ ದಸರಾ" ಉದ್ಘಾಟಿಸಿ ವೈದ್ಯಕೀಯ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು