ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸೆಪ್ಟೆಂಬರ್ 26, 2022
ಮೈಸೂರು,ಸೆ.೨೬- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದರು.
ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳ ಜೊತೆಗಿದ್ದರು.
0 ಕಾಮೆಂಟ್‌ಗಳು