ವರದಿ-ಹನೂರು ಶಾರೂಖ್ ಖಾನ್
ಹನೂರು : ಪಟ್ಟಣದಲ್ಲಿ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಸಮೀಪದ ಹಳ್ಳಕ್ಕೆ ಪಲ್ಟಿಯಾದ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಆಸ್ಪತೆಗೆ ರವಾನಿಸಲಾಗಿದೆ.
ಕೊಳ್ಳೇಗಾಲ ಮುಖ್ಯರಸ್ತೆಯ ಹನೂರು ಮಾರ್ಗವಾಗಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಅಕಸ್ಮಾತ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
