ದಸರಾ : ಅಂತರ ರಾಜ್ಯ ವಾಹನಗಳಿಗೆ ತೆರಿಗೆ ವಿನಾಯ್ತಿ

ಬೆಂಗಳೂರು : ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ ಅಂತರ ರಾಜ್ಯ ಪ್ರವಾಸಿಗರಿಗೆ ಅನುಕೂಲವಾಗಲು ಸೆ.೨೯ರಿಂದ ಅಕ್ಟೋಬರ್ ೬ರ ತನಕ, ೮ ದಿನಗಳ ಕಾಲ ಹೊರರಾಜ್ಯದ ವಾಹನಗಳಿಗೆ ತೆರಿಗೆ ವಿನಾಯ್ತಿ ಘೋಷಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ಕೃಷ್ಣರಾಜಸಾಗರ ಜಲಾಶಯ ವೀಕ್ಷಣೆಗೆ ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಈ ತೆರಿಗೆ ವಿನಾಯ್ತಿ ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು