ವಿಷ್ಣುವರ್ಧನ್ ಅವರ ೭೨ನೇ ಹುಟ್ಟು ಹಬ್ಬದ ಪ್ರಯುಕ್ತ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ಬೃಹತ್ ರಕ್ತದಾನ ಶಿಬಿರ
ಪಾಂಡವಪುರ : ಸಾಹಸಸಿಂಹ ಎಂದೇ ಕನ್ನಡ ಚಿತ್ರರಂಗದಲ್ಲಿ ಖ್ಯಾತರಾಗಿದ್ದ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ನೀಡಬೇಕೆಂದು ವಿಷ್ಣು ಸೇನಾ ಸಮಿತಿ ಜಿಲ್ಲಾಧ್ಯಕ್ಷ ವಿಷ್ಣುವಿಠಲ ಒತ್ತಾಯಿಸಿದರು.ಪಾಂಡವಪುರ ತಾಲ್ಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ವಿಷ್ಣು ಅವರ ೭೨ನೇ ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಷ್ಣುವರ್ಧನ್ ಅವರು ಕನ್ನಡ ನಾಡಿನ ಮೇರುನಟರು. ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಸದಾ ಹೋರಾಟ ನಡೆಸಿದವರು. ಕನ್ನಡ ಚಲನಚಿತ್ರರಂಗಕ್ಕೆ ಅವರ ಸೇವೆ ಅಪಾರವಾಗಿದೆ. ಕೇಂದ್ರ ಸರ್ಕಾರ ಇವರಿಗೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ನೀಡಬೇಕೆಂದು ಕೋರಿದರು.ವಿಷ್ಣುವರ್ಧನ್ ಹೆಸರಿನಲ್ಲಿ ಸಮಿತಿಯಿಂದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿದ್ದೇವೆ. ಕರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಅವರ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ದೊಡ್ಡಮಟ್ಟದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿ ವಿಷ್ಣು ಅವರಿಗೆ ನಮ್ಮ ಗೌರವ ಸಲ್ಲಿಸಿದ್ದೇವೆ ಎಂದರು.ಸಂಜೆ ಜೂನಿಯರ್ ವಿಷ್ಣುವರ್ಧನ್ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನೂರಾರು ವಿಷ್ಣು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಕರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡಿದಂತಹ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಡ್ರೈವರ್ ಆನಂದ್ ಮತ್ತು ಡಿ ಗ್ರೂಪ್ ನೌಕರರಾದ ಅಶ್ವಿನಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.ವಿಷ್ಣು ಅಭಿಮಾನಿಗಳು ಕೇಕ್ ಕತ್ತರಿಸಿ ಮತ್ತು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಮುಖಂಡರಾದ ಬಂಡಿಪಾಳ್ಯ ಗಿರೀಶ್, ಚಿನಕುರಳಿ ಪ್ರದೀಪ್, ಶಿವಕುಮಾರ್, ಮಾದೇವ, ಚಿಕ್ಕಾಡೆ ಶ್ರೀನಿವಾಸ್, ದೊಡ್ಡ ಬ್ಯಾಡರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಿಷ್ಣು ಅಭಿಮಾನಿಗಳಾದ ಧರ್ಮ, ಕಾರ್ತಿ, ಸಂತು, ಕೆಂಪೇಗೌಡ, ಕೃಷ್ಣ ಮುಂತಾದರು ಇದ್ದರು.
ಪಾಂಡವಪುರ : ಸಾಹಸಸಿಂಹ ಎಂದೇ ಕನ್ನಡ ಚಿತ್ರರಂಗದಲ್ಲಿ ಖ್ಯಾತರಾಗಿದ್ದ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ನೀಡಬೇಕೆಂದು ವಿಷ್ಣು ಸೇನಾ ಸಮಿತಿ ಜಿಲ್ಲಾಧ್ಯಕ್ಷ ವಿಷ್ಣುವಿಠಲ ಒತ್ತಾಯಿಸಿದರು.
ಪಾಂಡವಪುರ ತಾಲ್ಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ವಿಷ್ಣು ಅವರ ೭೨ನೇ ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಷ್ಣುವರ್ಧನ್ ಅವರು ಕನ್ನಡ ನಾಡಿನ ಮೇರುನಟರು. ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಸದಾ ಹೋರಾಟ ನಡೆಸಿದವರು. ಕನ್ನಡ ಚಲನಚಿತ್ರರಂಗಕ್ಕೆ ಅವರ ಸೇವೆ ಅಪಾರವಾಗಿದೆ. ಕೇಂದ್ರ ಸರ್ಕಾರ ಇವರಿಗೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ನೀಡಬೇಕೆಂದು ಕೋರಿದರು.
ವಿಷ್ಣುವರ್ಧನ್ ಹೆಸರಿನಲ್ಲಿ ಸಮಿತಿಯಿಂದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿದ್ದೇವೆ. ಕರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಅವರ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ದೊಡ್ಡಮಟ್ಟದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿ ವಿಷ್ಣು ಅವರಿಗೆ ನಮ್ಮ ಗೌರವ ಸಲ್ಲಿಸಿದ್ದೇವೆ ಎಂದರು.
ಸಂಜೆ ಜೂನಿಯರ್ ವಿಷ್ಣುವರ್ಧನ್ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನೂರಾರು ವಿಷ್ಣು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಕರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡಿದಂತಹ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಡ್ರೈವರ್ ಆನಂದ್ ಮತ್ತು ಡಿ ಗ್ರೂಪ್ ನೌಕರರಾದ ಅಶ್ವಿನಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.
ವಿಷ್ಣು ಅಭಿಮಾನಿಗಳು ಕೇಕ್ ಕತ್ತರಿಸಿ ಮತ್ತು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಮುಖಂಡರಾದ ಬಂಡಿಪಾಳ್ಯ ಗಿರೀಶ್, ಚಿನಕುರಳಿ ಪ್ರದೀಪ್, ಶಿವಕುಮಾರ್, ಮಾದೇವ, ಚಿಕ್ಕಾಡೆ ಶ್ರೀನಿವಾಸ್, ದೊಡ್ಡ ಬ್ಯಾಡರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಿಷ್ಣು ಅಭಿಮಾನಿಗಳಾದ ಧರ್ಮ, ಕಾರ್ತಿ, ಸಂತು, ಕೆಂಪೇಗೌಡ, ಕೃಷ್ಣ ಮುಂತಾದರು ಇದ್ದರು.
0 ಕಾಮೆಂಟ್‌ಗಳು