ಕೆ.ಆರ್.ನಗರ : ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ ಡಿ.ರವಿಶಂಕರ್ ಗೆಲುವಿಗೆ ಒಗ್ಗಟ್ಟಾಗಿ ದುಡಿಯಲು ಮಲ್ಲೇಶ್ ಕೋಟೆ ಕರೆ


 ವರದಿ : ಮೊಹಮ್ಮದ್ ಶಬ್ಬೀರ್, ಕೆ.ಆರ್.ನಗರ

ಕೆ.ಆರ್.ನಗರ- ಸೆ.೨೦ : ಜನಸಾಮಾನ್ಯರು ಉತ್ತಮವಾದ ಜೀವನ ನಡೆಸಲು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕು ಎಂದು ಕಾಂಗ್ರೆಸ್ ಮುಖಂಡ ಮಲ್ಲೇಶ್ ಕೋಟೆ ಹೇಳಿದರು. 
ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ತಾಲ್ಲೂಕು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ವಸೀಂ ಪಾಷ ಹಾಗೂ ಮುತ್ತಹರ್ ರವರ ಆದೇಶ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
ಸಂಘಟನೆಯ ಸದಸ್ಯರು ಪಂಚಾಯಿತಿವಾರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು. ಹಾಲಿ ಶಾಸಕರ ಆಡಳಿತ ವೈಖರಿಯನ್ನು ಜನತೆಗೆ ತಿಳಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಅವರ ಗೆಲುವಿಗೆ ನೀವುಗಳು ಕಾರಣಕರ್ತರಾಗಬೇಕು ಎಂದರು. 
ಬಿಜೆಪಿ ಶ್ರೀಮಂತರು ಮತ್ತು ಉದ್ಯಮಿಗಳ ಪರವಾಗಿ ಆಡಳಿತ ನಡೆಸುತ್ತಿದ್ದು ಬಡವರು ಮತ್ತು ಹಿಂದುಳಿದ ವರ್ಗಗಳಿಗೆ ಮುಳ್ಳಾಗಿದೆ. ಉತ್ತಮವಾದ ಜೀವನ ನಡೆಸಲು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಬಿಜೆಪಿ ಪಕ್ಷದ ಬಿ ಟೀಂ ಆಗಿರುವ ಜೆಡಿಎಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ಸೇರಿದಂತೆ ಹಿಂದುಳಿದ ವರ್ಗಗಳು ಯಾವುದೇ ಕಾರಣಕ್ಕೂ ಮತ ನೀಡಬೇಡಿ ಎಂದು ಮನವಿ ಮಾಡಿದರು. 
ಜೆಡಿಎಸ್ ಈ ಬಾರಿ ಗೆಲುವ ಸಾಧ್ಯತೆ ಕಡಿಮೆ ಇದೆ. ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವ ಅವಕಾಶಗಳು ಹೆಚ್ಚಾಗಿವೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕೆ.ಆರ್.ನಗರ ಕ್ಷೇತ್ರದ ಅಭಿವೃದ್ದಿಗಾಗಿ ಡಿ.ರವಿಶಂಕರ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.  
ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಮಾಜಿ ಸದಸ್ಯ ನಟರಾಜ್, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್, ಆನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ಮುಖಂಡರಾದ ಲಕ್ಕಿಕುಪ್ಪೆ ಮಂಜೇಗೌಡ, ಹೆಬ್ಬಾಳು ನಾಗೇಂದ್ರ, ರಾಜೇಗೌಡ, ಮಹದೇವ್, ಮುಸ್ತಫಾ, ಗೋವಿಂದೇಗೌಡ ಮತ್ತಿತರರು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು