ಸೋಮವಾರ ಸಚಿವರಾದ ಎಸ್.ಟಿ.ಸೋಮಶೇಖರ್, ಆನಂದ್‌ಸಿಂಗ್ ಅವರಿಂದ ವಸ್ತುಪ್ರದರ್ಶನ ಉದ್ಘಾಟನೆ

 ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಅವರಿಂದ ಸುದ್ದಿಗೋಷ್ಠಿ

ಮೈಸೂರು : ಸೆ.೨೬ ರಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ದಸರಾ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ತಿಳಿಸಿದರು. 
ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೯೦ ದಿನಗಳ ಕಾಲ ವಸ್ತುಪ್ರದರ್ಶನ  ನಡೆಯಲಿದೆ. ಸ್ಥಳೀಯ ಮತ್ತು ಹೊರ ರಾಜ್ಯಗಳ ವ್ಯಾಪಾರಸ್ಥರು ವೈವಿಧ್ಯಮಯ ಉತ್ಪನ್ನಗಳನ್ನು ಮತ್ತು ತಿಂಡಿ-ತಿನಿಸುಗಳನ್ನು ಮಾರಾಟ ಮಾಡಲಿದ್ದಾರೆ, ಅಲ್ಲದೇ ವಸ್ತುಪ್ರದರ್ಶನಕ್ಕೆ ಹೊಸತನ ತರುವ ಉದ್ದೇಶದಿಂದ ‘ಸ್ಯಾಂಡ್ ಮ್ಯೂಸಿಯಂ’ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ವಸ್ತುಪ್ರದರ್ಶನದಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಸುಮಾರು ೬೦ಕ್ಕೂ ಹೆಚ್ಚು ರೀತಿಯ ಅಮ್ಯೂಸ್ ಮೆಂಟ್ ಐಟಂಗಳನ್ನು ಅಳವಡಿಸಲಾಗಿದ್ದು, ಸ್ಯಾಂಡ್ ಮ್ಯೂಸಿಯಂ ಮತ್ತು ‘ಲೇಸರ್ ಷೋ’ ನಿರ್ಮಿಸಲಾಗಿದೆ. ೨೦೨೨ರ ದಸರಾ ವಸ್ತುಪ್ರದರ್ಶನದ ಅವಧಿಯಲ್ಲಿ ಈ ಬಾರಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಮಳಿಗೆಗಳು, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ, ವಾರ್ತಾ ಇಲಾಖೆ ಮತ್ತು ವಿಶೇಷ ಆಕರ್ಷಣೀಯ ಮಳಿಗೆಗಳಾಗಿರುತ್ತವೆ. ಕಾವೇರಿ ಕಲಾ ಗ್ಯಾಲರಿಯು ಸಹ ಉದ್ಘಾಟನೆಯಾಗಲಿದ್ದು, ಸಾರ್ವಜನಿಕರಿಗೆ ವಿಶೇಷವಾಗಿ ಈ ಬಾರಿ ನೋಡುವ ಅವಕಾಶವನ್ನು ಸಹ ಕಲ್ಪಿಸಲಾಗಿದೆ. ವಸ್ತುಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಪ್ರಾಧಿಕಾರದ ವತಿಯಿಂದ ವ್ಯವಸ್ಥಿತವಾಗಿ ವಿತರಿಸಲು ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. 
ಸುದ್ದಿಗೋಷ್ಠಿಯಲ್ಲಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ.ರುದ್ರೇಶ್ ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು