ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ : ಪಾಂಡವಪುರದಲ್ಲಿ ಸಿದ್ಧತೆ ಪರಿಶೀಲಿಸಿದ ಮಾಜಿ ಶಾಸಕ ಪ್ರಿಯಾ ಕೃಷ್ಣ
ಸೆಪ್ಟೆಂಬರ್ 29, 2022
ಪಾಂಡವಪುರ : ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಪಾಂಡವಪುರದಲ್ಲಿ ಆಗಮಿಸುವ ಹಿನ್ನೆಲೆ, ಬೆಂಗಳೂರು ಗೋವಿಂದರಾಜನಗರ ಕ್ಷೇತ್ರದ ಮಾಜಿ ಶಾಸಕ ಪ್ರಿಯಾಕೃಷ್ಣ ಗುರುವಾರ ಪಾಂಡವಪುರಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಬಳಿಕ ಅವರು ಮಾತನಾಡಿ, ಪಾದಯಾತ್ರೆ ಸಂದರ್ಭದಲ್ಲಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು. ಅವರನ್ನು ಕರೆತರುವ ಜವಾಬ್ದಾರಿ ಮುಖಂಡರ ಮೇಲಿದೆ. ಅತ್ಯಂತ ಶಿಸ್ತಿನಿಂದ ಪಾದಯಾತ್ರೆ ಯಶಸ್ಸಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನರೇಂದ್ರ ಬಾಬು, ದಯಾನಂದ, ಚಂದ್ರಶೇಖರ್ ಇನ್ನಿತರರು ಇದ್ದರು.
0 ಕಾಮೆಂಟ್‌ಗಳು