ವರದಿ : ಶಾರುಕ್ ಖಾನ್ ಹನೂರು
ಹನೂರು : ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಸಮುದಾಯಗಳನ್ನು ಒಡೆದು ಆಳುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ಇದಕ್ಕಾಗಿ ಭಾರತ್ ಜೋಡೊ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದರು.
ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಭಾರತ್ ಜೋಡೋ ಪಾದಯಾತ್ರೆ ಸಂಬಂಧ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಉಂಟು ಮಾಡಿರುವ ಸಮಸ್ಯೆಗಳ ಪೈಕಿ ಐದು ಮುಖ್ಯ ಅಂಶಗಳ ಬಗ್ಗೆ ದೇಶದ ಜನತೆಗೆ ತಿಳಿಸಿಕೊಡುವ ಉದ್ದೇಶದಿಂದ ಈ ಭಾರತ್ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ವರ್ಷಕ್ಕೆ ೨ ಕೋಟಿ ಉದ್ಯೋಗ… ಸೃಷ್ಟಿಸುವುದಾಗಿ ಜನರನ್ನು ನಂಬಿಸಿ ಮೋಸ ಮಾಡಿದ್ದಾರೆ. ದಿನಬಳಕೆ ವಸ್ತುಗಳು, ಆಹಾರ ಪದಾರ್ಥಗಳು, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ. ಕೀಟನಾಶಕ ಹಾಗೂ ರಸಗೊಬ್ಬರಗಳ ಬೆಲೆಯನ್ನು ಏರಿಸುವ ಮೂಲಕ ಸಾಮಾನ್ಯ ಜನರು ಹಾಗೂ ರೈತರ ಬದುಕನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಡಿ ದೇಶದಲ್ಲೆ ನಮ್ಮ ರಾಜ್ಯದಲ್ಲಿ ಸರ್ಕಾರವೇ ಗುತ್ತಿಗೆದಾರರು ಮತ್ತು ಸಾರ್ವಜನಿಕರಿಂದ ೪೦%. ಕಮಿಷನ್ ಕೇಳುತ್ತಿದೆ ಇಂತ ಸರ್ಕಾರ ನಮಗೆ ಬೇಕಾ ಎಂದು ಪ್ರಶ್ನಿಸಿದರು.
ಶಾಸಕ ಆರ್.ನರೇಂದ್ರ ಮಾತನಾಡಿ, ರಾಹುಲ್ ಗಾಂಧಿಯವರು ನಮ್ಮ ದೇಶದ ಆಸ್ತಿ. ಇವರು ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆ ಮುಂದೊಂದು ದಿನ ಇತಿಹಾಸ ಸೃಷ್ಟಿಸಲಿದ್ದು, ಪಾಲ್ಗೊಳ್ಳುವ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್‌ನ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಸುದೇಶ್, ಸಂಪತ್‌ಕುಮಾರ್, ಹರೀಶ್ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ, ನಿರ್ದೇಶಕ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮುರುಗೇಶ್, ,ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್, ಸುರೇಶ್, ಮುಖಂಡರಾದ ಚೇತನ್, ದೊರೈರಾಜು, ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ ಇನ್ನಿತರರು ಇದ್ದರು.
0 ಕಾಮೆಂಟ್‌ಗಳು