ಕೈಗಾರಿಕಾ ದಸರಾ : ೨೬. ೨೭ಕ್ಕೆ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ನವ ಉದ್ಯಮಿಗಳಿಗೆ ವಿಚಾರ ಸಂಕಿರಣ


 ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಪ್ರಥಮ ಬಾರಿಗೆ ಕೈಗಾರಿಕಾ ದಸರಾವನ್ನು ಸೆ.೨೬ ರಿಂದ ೩೦ರವರೆಗೆ ಆಯೋಜಿಸಲಾಗುತ್ತಿದೆ. ಹೀಗಾಗಿ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಕೈಗಾರಿಕಾ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿದಾರರ ಸಂಘ ತಿಳಿಸಿದೆ.

ಈ ಕುರಿತು ಸಂಘದ ಅಧ್ಯಕ್ಷರಾದ ಆರ್.ಮಂಜುನಾಥ್, ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೨೬ ಮತ್ತು ೨೭ ರಂದು ಕೈಗಾರಿಕಾ ವಿಚಾರ ಸಂಕಿರಣವಿರಲಿದೆ. ಕಾರ್ಯಕ್ರಮದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ಇಚ್ಛೆಯುಳ್ಳವರು, ಈಗ ಕಾರ್ಯ ನಿರ್ವಹಿಸುತ್ತಿರುವ ಉದ್ದಿಮೆದಾರರಿಗೆ ಅನುಕೂಲವಾಗುವಂತೆ ಕೈಗಾರಿಕಾ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ, ಬ್ಯಾಂಕ್ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಲಿದ್ದಾರೆ.

ಸೆ.೨೮ ರಂದು ವೆಂಡರ್ ಡೆವಲಪ್ಮೆಂಟ್, ೨೯ ಹಾಗೂ ೩೦ರಂದು ಉದ್ದಿಮೆದಾರರು, ವಿದ್ಯಾರ್ಥಿಗಳಿಗೆ ಕೈಗಾರಿಕಾ ಪ್ರವಾಸವನ್ನು ಏರ್ಪಡಿಸಲಾಗಿದೆ. ವಿಶೇಷವಾಗಿ ಮಹಿಳಾ ನಿರುದ್ಯೋಗಿಗಳಿಗೆ ಇದು ಅನುಕೂಲಕಾರಿಯಾಗಿದೆ. ಹೀಗಾಗಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಇಚ್ಛಿಸುವವರು ನೋಂದಣಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ. ೯೯೧೬೨ ೫೦೫೫೭ ನ್ನು ಸಂಪರ್ಕಿಸಬಹುದೆಂದರು.

ಪದಾಧಿಕಾರಿಗಳಾದ ಈಶ್ವರ್ ಚಕ್ಕಡಿ, ವಿಜಯಶಂಕರ್,  ಶ್ರೀಧರ್ ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು