ರಕ್ತದಾನಕ್ಕೆ ಯುವಕರು ಮುಂದಾಗಬೇಕು : ಶಾಸಕ ಡಿ.ಸಿ.ತಮ್ಮಣ್ಣ



ವರದಿ-ಟಿ.ಬಿ.ಸಂತೋಷ, ಮದ್ದೂರು 

ಮದ್ದೂರು : ತಾಲೂಕಿನ ಪ್ರಗತಿಪರ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಹಾಗೂ ಗಾಂಧಿ ಜಯಂತಿ ಅಂಗವಾಗಿ ಮದ್ದೂರು ಪಟ್ಟಣದ ಶಿವಪುರ ಧ್ವಜ ಸತ್ಯಾಗ್ರಹ ಅವರಣದಲ್ಲಿ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರದದ ಪೋಸ್ಟರ್ ಅನ್ನು ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ. ತಮ್ಮಣ್ಣ ಬಿಡುಗಡೆ ಮಾಡಿ ಶಿಬಿರಕ್ಕೆ ಬೆಂಬಲ ಸೂಚಿಸಿ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಅವರು ಮಾತನಾಡಿ, ಕ್ಷೇತ್ರದ ಜನತೆ ಹಾಗೂ ಯುವ ಸಮುದಾಯ ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕು ಹಾಗೂ ಆರೋಗ್ಯವಂತ ಜೀವನಕ್ಕೆ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಸಲಹೆ ನೀಡಿದರು. 
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಶ್ರೀಕ ಶ್ರೀನಿವಾಸ, ನವಚೇತನ ಸೇವಾ ಟ್ರಸ್ಟ್ ಅಧ್ಯಕ್ಷ ಜಯಂತ್, ತೈಲೂರು ಸಿದ್ದರಾಜು, ಕುಮಾರ್, ಕಲಿಮ್ ಪಾಷಾ ಮುಂತಾದವರು ಉಪಸ್ಥಿತರಿದ್ದರು


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು