ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.
ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಇದ್ದರು.
0 ಕಾಮೆಂಟ್‌ಗಳು