ಎಸ್.ಟಿ.ಸೋಮಶೇಖರ್ ವಿರುದ್ಧ ಎಫ್‍ಐಆರ್ ಹಿನ್ನೆಲೆ ಸಚಿವರನ್ನು ದಸರಾ ಕಾರ್ಯಕ್ರಮದಿಂದ ಹೊರಗಿಡುವಂತೆ ಕೆ.ಎಸ್.ಶಿವರಾಮು ಆಗ್ರಹ


 ಮೈಸೂರು : ಭ್ರμÁ್ಟಚಾರ ಆರೋಪದ ಮೇಲೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿರುವ ಕಾರಣ ಸರ್ಕಾರ ಅವರನ್ನು ಮೈಸೂರು ದಸರಾ ಕಾರ್ಯಕ್ರಮಗಳಿಂದ ಹೊರಗಿಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಆಗ್ರಹಿಸಿದರು.

ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಅವರಿಗೆ 

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಸಚಿವ ಎಸ್.ಟಿ. ಸೋಮಶೇಖರ್ ಅವರು ತಮ್ಮ ಪ್ರಭಾವ ಬಳಸಿ ಬಿಡಿಎ ವಸತಿ ಸಮುಚ್ಛಯ ಟೆಂಡರ್ ಅಂತಿಮಗೊಳಿಸಿ, ಕಾರ್ಯಾದೇಶ ನೀಡಿರುವ ಆರೋಪವಿದೆ. ಈ ಸಂಬಂಧ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಚಿವರ ಮೇಲೆ ಗುರುತರ ಆರೋಪವಿದ್ದರೂ ದಸರಾ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದನ್ನು ಜಿಲ್ಲಾಧಿಕಾರಿಗಳು ನಿರ್ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಕಾನೂನು ಎಲ್ಲರಿಗೂ ಒಂದೇ ಆಗಿದೆಯೇ ಎಂಬ ಶಂಕೆ ಕಾಡುತ್ತಿದೆ. ವಾಸ್ತವವಾಗಿ ಎಫ್‍ಐಆರ್ ದಾಖಲಾದ ಕೂಡಲೇ ಸಚಿವರು ರಾಜೀನಾಮೆ ನೀಡಬೇಕಾಗಿತ್ತು. ಕನಿಷ್ಠ ದಸರಾ ಕಾರ್ಯಕ್ರಮಗಳಿಂದಲೂ ದೂರ ಉಳಿಯಬೇಕಾಗಿತ್ತು. ಜೊತೆಗೆ ಜಿಲ್ಲಾಧಿಕಾರಿಗಳು ಸಹ ಸಚಿವರಿಗೆ ಪಾಲ್ಗೊಳ್ಳಲು ಅವಕಾಶ ನೀಡಬಾರದಾಗಿತ್ತು. ರಾಷ್ಟ್ರಪತಿಗಳು ಪಾಲ್ಗೊಳ್ಳುತ್ತಿರುವ ದಸರಾ ಉದ್ಘಾಟನೆ ವೇಳೆ ವೇದಿಕೆಯಲ್ಲಿ ಆರೋಪ ಹೊತ್ತಿರುವ ಸಚಿವರು ಪಾಲ್ಗೊಳ್ಳುವುದರಿಂದಾಗಿ ವಿಶ್ವ ಮಟ್ಟದಲ್ಲಿ ದಸರಾಕ್ಕೆ ಕಳಂಕ ಬರುತ್ತದೆ. ಕೂಡಲೇ ಸಚಿವರು ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಡಿ. ನಾಗಭೂಷಣ್, ಮುಖಂಡರಾದ ಲೋಕೇಶ್‍ಕುಮಾರ್ ಮಾದಾಪುರ, ಬಸವಣ್ಣ, ಸಂಜಯ್, ಆರ್.ಕೆ. ರವಿ, ಸತ್ಯನಾರಾಯಣ ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು