ಹನೂರು : ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರದ ಮುಂದುವರಿದ ಭಾಗವಾಗಿ ಅ.15ರ ಬಳಿಕ ತರಬೇತಿ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾದ್ಯಕ್ಷ ಎಂ.ಆರ್.ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಪಕ್ಷದ ಸಹಯೋಗದೊಂದಿಗೆ ಎನ್‍ಸಿಜಿ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ ನೀಡಲಾಗುತ್ತದೆ. ಈಗಾಗಲೇ 50 ಜನರು ನೋಂದಣಿ ಮಾಡಿಕೊಂಡಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಉನ್ನತ ಶಿಕ್ಷಣ ಪಡೆದವರು ಸಹ ಹುದ್ದೆ ಗಿಟ್ಟಿಸಿಕೊಳ್ಳುವ ಸಂಬಂಧ ಮಾರ್ಗದರ್ಶನ ಪಡೆಯಲು ಅರ್ಹರಾಗಿದ್ದಾರೆ. ಎಲ್ಲರೂ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು. ಇದೀಗ ಪೊಲೀಸ್ ಇಲಾಖೆಯಲ್ಲೂ ನೇಮಕಾತಿ ನಡೆಯುತ್ತಿದ್ದು, ಈ ಹುದ್ದೆಗಾಗಿಯೂ ತರಬೇತಿ ಪಡೆಯುವುದು ಅಗತ್ಯ ಎಂದರು. ಇದೆ ವೇಳೆ ಎಲ್ಲರಿಗೂ ವಿಶ್ವಕರ್ಮ ಜಯಂತಿಯ ಶುಭಾಶಯ ತಿಳಿಸಿದರು.
ಮುಖಂಡರಾದ ರಾಜಶೇಖರ್ ಮೂರ್ತಿ, ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಸದಸ್ಯ ನಾಗೇಂದ್ರ ಬಾಬು, ರಾಜು, ಪಪಂ ಸದಸ್ಯ ಆನಂದ್ ಮತ್ತಿತರರು ಇದ್ದರು. (ವರದಿ-ಹನೂರು ಶಾರೂಖ್ ಖಾನ್)
0 ಕಾಮೆಂಟ್‌ಗಳು