ಹನೂರಿನಲ್ಲಿ ಎಸ್ ಕೆ ಡಿ ಆರ್ ಡಿ ಪಿ ನೂತನ ಕಚೇರಿ ಪ್ರಾರಂಭ
ವರದಿ-ಶಾರುಕ್ ಖಾನ್, ಹನೂರು
ಹನೂರು : ಕೊಳ್ಳೇಗಾಲ ತಾಲ್ಲೂಕಿನಲ್ಲಿ 11 ವರ್ಷಗಳಲ್ಲಿ 650 ಕೋಟಿ ರೂ. ಸಾಲ ನೀಡುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಈ ಭಾಗದ ಜನರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ತಿಳಿಸಿದರು.
ಶನಿವಾರ ಹನೂರು ಪಟ್ಟಣದಲ್ಲಿ ಸಂಸ್ಥೆಯ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ ನಂತರ ಅವರು ಮಾತನಾಡಿದರು.
ಕೊಳ್ಳೇಗಾಲ ತಾಲೂಕಿನಲ್ಲಿ ನಮ್ಮ ಸಂಸ್ಥೆ ಸುಮಾರು 5 ಸಾವಿರ ಮಹಿಳಾ ಸಂಘಗಳನ್ನು ಸ್ಥಾಪಿಸಿ 45 ಸಾವಿರ ಕುಟುಂಬಗಳ ಪ್ರಗತಿಗೆ ಅವಕಾಶ ಮಾಡಿಕೊಡಲಾಗಿದೆ. ಸಂಸ್ಥೆಯು ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪ್ರಮುಖವಾಗಿ ಕೆರೆಗಳ ಪುನಶ್ಚೇತನ, ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ, ಸರ್ಕಾರಿ ಶಾಲೆಗಳಿಗೆ ವಿವಿಧ ಸವಲತ್ತುಗಳನ್ನು ಕೊಡುವ ಮುಖಾಂತರ ಸರ್ಕಾರದ ಜೊತೆ ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದೆ ಎಂದರು.
ಕಳೆದ 11 ವರ್ಷಗಳಲ್ಲಿ ಈ ಭಾಗದ ಮಹಿಳಾ ಸಂಘಗಳಿಗೆ ಸುಮಾರು 650 ಕೋಟಿ ರೂಪಾಯಿ ಹಣವನ್ನು ಸಾಲದ ರೂಪದಲ್ಲಿ ಜನರಿಗೆ ಮುಟ್ಟಿಸಿದ್ದೇವೆ. ಸಾಲ ಪಡೆದವರು ಈ ಹಣವನ್ನು ವಾಪಸ್ಸು ಕಟ್ಟಿರುವುದೇ ಜನರು ಪರಿವರ್ತಿತರಾಗಿರುವುದಕ್ಕೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.
ಶಾಸಕ ಆರ್.ನರೇಂದ್ರ, ಮಾಜಿ ಶಾಸಕಿ ಪರಿಮಳ ನಾಗಪ್ಪ ಸಂಸ್ಥೆಯ ನೂತನ ಕಚೇರಿ ಪ್ರಾರಂಭಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ
ಲಂತಾ ಬಂಗೇರಾ, ಹನೂರು ಯೋಜನಾಧಿಕಾರಿ ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
0 ಕಾಮೆಂಟ್‌ಗಳು