ಸಾರಿಗೆ ಸಂಸ್ಥೆ ಬಸ್ ಅಪಘಾತ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ನಾಲ್ವರ ಸ್ಥಿತಿ ಗಂಭೀರ

ತಾಳುಬೆಟ್ಟದ ಬಳಿ ತಡೆಗೋಡೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದ ಬಸ್   

ವರದಿ-ಶಾರುಕ್ ಖಾನ್, ಹನೂರು 

ಹನೂರು : ಮಲೈ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ತಾಳುಬೆಟ್ಟದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಗರಿಗೆ ಪೆಟ್ಟಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬುಧವಾರ ಬೆಳಿಗ್ಗೆ ಘಟನೆ ನಡೆದಿದ್ದು, ಬಸ್ಸಿನಲ್ಲಿ 52 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಮಹದೇಶ್ವರ ಬೆಟ್ಟದಿಂದ ಬರುವಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಬಸ್ ಡ್ರೈವರ್ ಚಂದ್ರ, ನಾಗಮ್ಮ, ಪ್ರಕಾಶ್, ನಂದಿನಿ ಎಂಬ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು