ಮೈಸೂರಿಗೆ ಸಂಪರ್ಕ ಕಲ್ಪಿಸುವ ಕಿರಂಗೂರು ಬಳಿ ರೈತರಿಂದ ಬೃಹತ್ ರಸ್ತೆ ತಡೆ ಇಲವಾಲ ಬಳಿ ನೂರಾರು ರೈತರ ಬಂಧನ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಸರ್ಕಲ್‍ನಲ್ಲಿ ನಡೆಯುತ್ತಿರುವ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆ
ಮೈಸೂರು : ಟನ್ ಕಬ್ಬಿಗೆ 4,500 ರೂ. ನಿಗದಿ, ವಿದ್ಯುತ್ ತಿದ್ದುಪಡಿ ಬಿಲ್ ವಾಪಸ್ ಸೇರಿದಂತೆ ವಿವಿಧ 18 ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಮೈಸೂರಿಗೆ ಸಂಪರ್ಕ ಕಲ್ಪಿಸುವ ವಿವಿಧೆಡೆ ರಸ್ತೆ ತಡೆ ನಡೆಸಿ ಬಂಧನಕ್ಕೊಳಗಾದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೈಸೂರಿನ ಹುಣಸೂರು ರಸ್ತೆಯ ಇಲವಾಲ ಬಳಿ ಹಾಗೂ ಶ್ರೀರಂಗಪಟ್ಟಣ ಹೆದ್ದಾರಿಯ ಕಿರಂಗೂರು ಬಳಿ ಸೇರಿದಂತೆ ಸುಮಾರು 8 ಕಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಇಲವಾಲ ಮತ್ತು ಕಿರಂಗೂರಿನ ಬಳಿ ಬೃಹತ್ ಸಂಖ್ಯೆಯಲ್ಲಿ ರೈತರು ಜಮಾವಣೆಗೊಂಡು ರಸ್ತೆ ಮಧ್ಯೆ ಎತ್ತಿನ ಗಾಡಿಗಳನ್ನು ನಿಲ್ಲಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ಈ ವೇಳೆ ಇಲವಾಲದಲ್ಲಿ ಪ್ರತಿಭಟನೆ ನಡೆಸಿದ ರೈತರನ್ನು ಬಂಧಿಸಿದ ಪೊಲೀಸರು ರಸ್ತೆ ತೆರವುಗೊಳಿಸಿ ನಂತರ ಬಂಧಿತರನ್ನು ಬಿಡುಗಡೆ ಮಾಡಿದರು. ಕಿರಂಗೂರಿನಲ್ಲಿ ಇನ್ನೂ ಪ್ರತಿಭಟನೆ ಮುಂದುವರಿದಿದೆ.
0 ಕಾಮೆಂಟ್‌ಗಳು