ಮಾರ್ಟಳ್ಳಿ ಗ್ರಾಮದಲ್ಲಿ ವೃದ್ಧನ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಹುಚ್ಚು ನಾಯಿ
ವರದಿ-ಶಾರುಕ್ ಖಾನ್, ಹನೂರು
ಹನೂರು ; ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚು ನಾಯಿ ಹಾವಳಿ ಹೆಚ್ಚಾಗಿದ್ದು, ವೃದ್ಧರೊಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಲ್ಲದೇ, ಒಂದೇ ದಿನ ಸುಮಾರು 13 ಜನರಿಗೆ ಕಚ್ಚಿ ಗಾಯಗೊಳಿಸಿದೆ.
ರಾಯಪ್ಪನ್ ಸಂದನ್ ಪಾಳ್ಯ ಎಂಬ ವೃದ್ಧರು ಹುಚ್ಚು ನಾಯಿ ಕಡಿತದಿಂದ ತೀವ್ರ ವಾಗಿ ಗಾಯಗೊಂಡಿದ್ದು, ಹುಚ್ಚು ನಾಯಿ ಜನರಿಗೆ ಕಚ್ಚಿದ್ದಲ್ಲದೇ ಹಸು., ಕುರಿಗಳ ಮೇಲೂ ದಾಳಿ ನಡೆಸಿ ಗಾಯಗೊಲಿಸಿದೆ. ಹುಚ್ಚು ನಾಯಿಯ ಹಾವಳಿ ಬಗ್ಗೆ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
0 ಕಾಮೆಂಟ್‌ಗಳು