ಮೈಸೂರು : ಎಸ್‍ಸಿ. ಎಸ್‍ಟಿ ವರ್ಗದವರ ಮೀಸಲಾತಿ ಹೆಚ್ಚಳ ಆಗ್ರಹಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಇದೇ ಅ.ಒಂಭತ್ತಕ್ಕೆ 240 ದಿನ ಮೀರಲಿದೆ. ಹೀಗಾಗಿ ಈ ಧರಣಿಗೆ ಬೆಂಬಲ ನೀಡಿ ತಾವೂ ಸಹಾ ಪಾಲ್ಗೊಳ್ಳುವುದಾಗಿ ಮಾಜಿ ಮೇಯರ್ ಪುರುμÉೂೀತ್ತಮ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಸ್ವಾಮೀಜಿಗಳ ಬೇಡಿಕೆ ಈಡೇರಿಸುವುದಾಗಿ ನೀಡಿದ್ದ ಮಾತಿನಂತೆ ಸಿಎಂ ನಡೆದುಕೊಂಡಿಲ್ಲ. ಹೀಗಾಗಿ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿಯೂ ವಿವಿಧ ಸಮುದಾಯಗಳ ಸ್ವಾಮೀಜಿಗಳು ಪ್ರವಾಸ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅ. ಒಂಭತ್ತರಂದು ಫ್ರೀಡಂ ಪಾಕ್ರ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ವೇಳೆ ಸುಮಾರು ಐದು ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದಲೂ ಸುಮಾರು 20 ಸಾವಿರ ಮಂದಿ ತಮ್ಮ ತಮ್ಮ ವಾಹನಗಳಲ್ಲಿ ಅಲ್ಲಿಗೆ ಪ್ರಯಾಣ ಬೆಳೆಸಿ ಸ್ವಾಮೀಜಿಗೆ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ತಿಳಿಸಿದರು.
ಒಂದು ವೇಳೆ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ಸರ್ಕಾರ ಬರದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಬೇಕಾಗುತ್ತದೆ. ಕೇವಲ ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಸಮಾಜದವರೇ ಸಿಎಂ ಸ್ಥಾನ ಮೊದಲಾದವನ್ನು ಪಡೆಯುತ್ತಿದ್ದಾರೆ. ಆದರೆ ಒಂದೂವರೆ ಕೋಟಿಯಷ್ಟಿರುವ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಾತಿನಿಧ್ಯಕ್ಕಾಗಿ ಮೀಸಲಾತಿ ಹೆಚ್ಚಳ ಅನಿವಾರ್ಯವಾಗಿದೆ. ಆದ್ದರಿಂದ ಈ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿರುವುದಾಗಿ ಹೇಳಿದರು.
ಸೋಮಯ್ಯ ಮಲೆಯೂರು, ಚಿಕ್ಕಜವರಪ್ಪ, ವಿಷಕಂಠ ಹಾಜರಿದ್ದರು.

0 ಕಾಮೆಂಟ್‌ಗಳು