ಶ್ರೀ ವಾಲ್ಮೀಕಿ ಜಯಂತಿಯಂದೇ ಸರ್ಕಾರ ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಗಮನಾರ್ಹ : ಶಾಸಕ ಆರ್.ನರೇಂದ್ರ

ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಶಾಸಕರು, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪಾಳ್ಯಕೃಷ್ಣ

ವರದಿ-ಶಾರುಕ್ ಖಾನ್, ಹನೂರು

ಹನೂರು : ಮಹರ್ಷಿ ಶ್ರೀ ವಾಲ್ಮೀಕಿಯವರ ಜಯಂತಿ ದಿನದಂದೇ ಸರ್ಕಾರ ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಸಂತಸ ತಂದಿದೆ ಎಂದು ಶಾಸಕ ಆರ್.ನರೇಂದ್ರ ಹೇಳಿದರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಮಾತನಾಡಿದರು.
ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ-ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಸರ್ಕಾರ ಎಸ್ಟಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 241 ದಿನಗಳ ಅನಿರ್ದಿμÁ್ಟವಧಿ ಧರಣಿ ನಡೆಸಿದ ಪ್ರಯತ್ನಕ್ಕೆ ನ್ಯಾಯ ದೊರಕಿದೆ. ರಾಜ್ಯ ಸರ್ಕಾರ ಶೀಘ್ರದಲ್ಲೇ ಅಸೆಂಬ್ಲಿಯಲ್ಲಿ ಒಪ್ಪಿಗೆ ಪಡೆದು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟು ಮೀಸಲಾತಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮುಖಂಡ ಪಾಳ್ಯ ಕೃಷ್ಣ ಮಾತನಾಡಿ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲು ಕಾರಣಕರ್ತರಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಹಾಗೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಶಾಸಕರುಗಳು, ಸರ್ಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳು, ತಹಸಿಲ್ದಾರ್ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಪಂ ಮುಖ್ಯಾಧಿಕಾರಿ ಪರಶಿವಯ್ಯ, ದೈಹಿಕ ಪರಿವೀಕ್ಷಕ ಮಹದೇವ್, ಆರ್‍ಎಫ್‍ಒ ಪ್ರವೀಣ್, ಲೋಕೋಪಯೋಗಿ ಇಲಾಖೆ ಕಿರಿಯ ಅಭಿಯಂತರ ಸತೀಶ್, ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ನಾಯಕ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು, ಯಜಮಾನರುಗಳು ಉಪಸ್ಥಿತರಿದ್ದರು