ಹನೂರು : ಎಲ್ಲೇಮಾಳ ಗ್ರಾಮದ ಬಳಿ ಕಾರಿಗೆ ಬಸ್ ಡಿಕ್ಕಿ
ವರದಿ-ಶಾರುಕ್ ಖಾನ್, ಹನೂರು
ಹನೂರು ; ಬೆಳ್ಳಂ ಬೆಳಗ್ಗೆ ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬುಧವಾರ ಬೆಳಿಗ್ಗೆ ತೆರಳುತ್ತಿದ್ದ ಭಕ್ತಾದಿಗಳ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತವಾದ ಕಾರಿನಲ್ಲಿ 5 ಜನರು ಪ್ರಯಾಣ ಮಾಡುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರು ಮತ್ತು ಬಸ್ಸು ಎರಡು ಜಖಂಗೊಂಡಿದೆ.
