ಹುತಾತ್ಮರಿಗೆ ಗೌರವ ಕೊಡುವ ಕೆಲಸ ನಮ್ಮದಾಗಬೇಕು : ಡಾ.ಎಂ.ಮಾಲತಿ ಪ್ರಿಯಾ

ಮೃತರ ಗೌರವಾರ್ಥ ಮೂರು ಸುತ್ತು ಗಾಳಿ ಫೈರಿಂಗ್

ವರದಿ-ನಜೀರ್ ಅಹಮದ್, ಮೈಸೂರು

ಮೈಸೂರು : ಹುತಾತ್ಮರಾದ ಧೈರ್ಯಶಾಲಿ ಪೊಲೀಸ್ ಸಿಬ್ಬಂದಿಯನ್ನು ಹೆಮ್ಮೆಯಿಂದ ನೆನಪಿಸಿಕೊಂಡು ಅವರಿಗೆ ಗೌರವ ಕೊಡುವ ಕೆಲಸ ನಮ್ಮದಾಗಬೇಕೆಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಂ.ಮಾಲತಿ ಪ್ರಿಯಾ ಹೇಳಿದರು.

ಮೈಸೂರು ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದಲ್ಲಿರುವ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಮಹಾನಿರೀಕ್ಷಕರು ದಕ್ಷಿಣ ವಲಯ ಹಾಗೂ ಮೈಸೂರು ನಗರ, ಮೈಸೂರು ಜಿಲ್ಲೆ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆಎಸ್‍ಆರ್‍ಪಿ ಪೊಲೀಸ್ ಘಟಕಗಳ ವತಿಯಿಂದ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.   
ದೇಶಾದ್ಯಂತ ಕರ್ತವ್ಯದಲ್ಲಿ ನಿರತರಾಗಿದ್ದಾಗ ಮೃತಪಟ್ಟ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ, ಬಲಿದಾನ ಮತ್ತು ಸೇವೆಯನ್ನು ಸ್ಮರಿಸುವ ಕೆಲಸವಾಗಬೇಕು. ಪೊಲೀಸ್ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಾರೆ. ಜತೆಗೆ ತಮ್ಮ ಜೀವದ ಹಂಗನ್ನು ತೊರೆದು ಕಾನೂನು ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಾರೆ. ನಾಗರಿಕರಿಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸುವ ಮನೋಭಾವ ಬರಬೇಕು ಎಂದರು. 

ಮೃತರ ಗೌರವಾರ್ಥ ಮೂರು ಸುತ್ತು ಗಾಳಿ ಫೈರಿಂಗ್ ನಡೆಸಲಾಯಿತು.  ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಆರ್.ಚೇತನ್, ಡಿಸಿಪಿಗಳಾದ ಗೀತ ಪ್ರಸನ್ನ ಎಂ.ಎಸ್, ಪ್ರದೀಪ್ ಗುಂಟಿ ಮತ್ತಿತರರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು