ವರದಿ-ಶಾರುಕ್ ಖಾನ್, ಹನೂರುಹನೂರು : ಜಮೀನಿನ ಮಾಲೀಕರು ಸಾರ್ವಜನಿಕರು ತಿರುಗಾಡುವ ಫುಟ್‌ಪಾತನ್ನು ಒತ್ತುವರಿ ಮಾಡಿಕೊಂಡು ಜನಸಂಚಾರಕ್ಕೆ ಅಡ್ಡಿಯನ್ನುಂಟುಮಾಡಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.ಹನೂರು ತಾಲೂಕಿನ ಶಿರಗೋಡು ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯನ್ನು ಜಮೀನಿನ ಮಾಲೀಕರು ಹೆಚ್ಚುವರಿಯಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ರಸ್ತೆಗೆ ಸೇರಿದಂತೆ ಕಲ್ಲಿನ ಕಂಬ ನೆಟ್ಟು ತಂತಿ ಅಳವಡಿಸಿಕೊಂಡು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ.ರಸ್ತೆ ಬದಿಯ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿ ರಸ್ತೆಯಲ್ಲಿ ಸಾರ್ವಜನಿಕರು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಹನೂರು : ಜಮೀನಿನ ಮಾಲೀಕರು ಸಾರ್ವಜನಿಕರು ತಿರುಗಾಡುವ ಫುಟ್‌ಪಾತನ್ನು ಒತ್ತುವರಿ ಮಾಡಿಕೊಂಡು ಜನಸಂಚಾರಕ್ಕೆ ಅಡ್ಡಿಯನ್ನುಂಟುಮಾಡಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹನೂರು ತಾಲೂಕಿನ ಶಿರಗೋಡು ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯನ್ನು ಜಮೀನಿನ ಮಾಲೀಕರು ಹೆಚ್ಚುವರಿಯಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ರಸ್ತೆಗೆ ಸೇರಿದಂತೆ ಕಲ್ಲಿನ ಕಂಬ ನೆಟ್ಟು ತಂತಿ ಅಳವಡಿಸಿಕೊಂಡು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ.
ರಸ್ತೆ ಬದಿಯ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿ ರಸ್ತೆಯಲ್ಲಿ ಸಾರ್ವಜನಿಕರು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.
0 ಕಾಮೆಂಟ್‌ಗಳು