ಹನೂರು : ಚೆನ್ನೂರ ಗಸ್ತಿನ ಮೂಲೆನಜರು ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆ ; ಇಬ್ಬರ ಬಂಧನ

 ವರದಿ-ಶಾರುಕ್ ಖಾನ್, ಹನೂರು 
ಹನೂರು : ತಾಲ್ಲೂಕಿನ ಕೌದಳ್ಳಿ ಚೆನ್ನೂರ ಗಸ್ತಿನ ಮೂಲೆನಜರು ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಇಬ್ಬರನ್ನು ಬಂಧಿಸಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.  
ಬಂಧಿತರನ್ನು ತಿಪ್ಪಬೋವಿ ಮತ್ತು ಸಿದ್ದರಾಜು ಎಂದು ಗುರುತಿಸಲಾಗಿದ್ದು,  
ಸಮೀಪದ ಕಾಡಿನಲ್ಲಿ ಜಿಂಕೆಯನ್ನು ಬೇಟೆಯಾಡಿ ರುಂಡ-ಮುಂಡಗಳನ್ನು ಬೇರ್ಪಡಿಸಿ ಚರ್ಮ ಸುಲಿದು ಮಾಂಸವನ್ನು ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಆರೋಫಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ ರಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. 
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಂ.ಅಂಕರಾಜು ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಬಿ.ಆನಂತರಾಮು, ಲೋಕೇಶ್, ಚವ್ಹಾಣ, ಅರಣ್ಯ ರಕ್ಷಕರಾದ ಮಲ್ಲಿಕಾರ್ಜುನ ಭೀಮಪ್ಪ ಹಂಗರಗಿ, ಮಹೇಂದ್ರ, ಅಭಿಷೇಕ್ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು