ಕನ್ನಡ ರಾಜ್ಯೋತ್ಸವದಂದು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಶಾಸಕ ಡಿ.ಸಿ. ತಮ್ಮಣ್ಣ ಮನವಿ


 ವರದಿ-ಟಿ.ಬಿ.ಸಂತೋಷ, ಮದ್ದೂರು

ಮದ್ದೂರು : 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಳೆ  ತಾಲೋಕಿನಾದ್ಯಂತ ಎಲ್ಲರೂ ತಮ್ಮ ತಮ್ಮ ಮನೆಗಳ ಮೇಲೆ ಕನ್ನಡ ಬಾವುಟಗಳನ್ನು ಹಾರಿಸುವಂತೆ ಶಾಸಕ ಡಿ.ಸಿ ತಮ್ಮಣ್ಣನವರು ಮನವಿ ಮಾಡಿದರು. 
ಕೆ.ಎಂ.ದೊಡ್ಡಿಯ ತಮ್ಮ ನಿವಾಸದಲ್ಲಿ ಕನ್ನಡ ಬಾವುಟ ಹಿಡಿದು ಗೌರವ ಸಲ್ಲಿಸಿ ಮಾತನಾಡಿದ ಅವರು, ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಎಲ್ಲರೂ ತಮ್ಮ ಮನೆಗಳ ಮೇಲೆ ಕನ್ನಡ ನೆಲ, ಜಲ, ಭಾμÉಯನ್ನು ಗೌರವಸುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಬಾವುಟ ಹಾರಿಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಪ್ರತಿಯೊಬ್ಬರು ತಮ್ಮ  ಮನೆಗಳ ಮೇಲೆ ಕನ್ನಡ ಬಾವುಟವನ್ನು ಹಾರಿಸಿ ಕನ್ನಡದ ಏಕತೆ, ಸಮಗ್ರತೆಯನ್ನು ಸಾರಬೇಕೆಂದು ಮನವಿ ಮಾಡಿದರು. 
ಈ ಸಂದರ್ಭದಲ್ಲಿ ಆಸರೆ ಸೇವಾ ಟ್ರಸ್ಟ್ ಅಧ್ಯಕ್ಷ ರಘು ವೆಂಕಟೆಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಗುರು ದೇವರಹಳ್ಳಿ ನವೀನ್, ಕರಡಕೆರೆ ಯೋಗೇಶ್, ಚಿಕ್ಕರಸಿನಕೆರೆ ಮೂರ್ತಿ, ಗುಡಿಗೆರೆ ಬಸವರಾಜ, ಕೆ.ಎಂ.ದೊಡ್ಡಿ ವಿಶ್ವ, ಅಣ್ಣುರು ಯೋಗೇಂದ್ರ, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು