ಇನ್ಸ್ ಪೆಕ್ಟರ್ ನಂದೀಶ್ ಸಾವು ಸರ್ಕಾರಿ ಪ್ರಾಯೋಜಿತ : ಕೆ.ಎಸ್.ಶಿವರಾಮು
ಅಕ್ಟೋಬರ್ 29, 2022
ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯ
ಮೈಸೂರು : ಅಮಾನತ್ತಿಗೆ ಒಳಗಾಗಿದ್ದ ಬೆಂಗಳೂರಿನ ಕೆ.ಆರ್.ಪುರಂ ಇನ್ಸ್ ಪೆಕ್ಟರ್ ನಂದೀಶ್ ಅವರ ಸಾವು ಸರ್ಕಾರಿ ಪ್ರಾಯೋಜಿತ ಸಾವೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾ ಡಿ, ದಿನನಿತ್ಯ ಜನ ಸಾಮಾನ್ಯರನ್ನು ರಕ್ಷಣೆ ಮಾಡುವ ಆರಕ್ಷರಿಗೆ ನಮ್ಮ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಗೃಹ ಇಲಾಖೆ ಸತ್ತಿದೆ. ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ನಿಯುಕ್ತಿ ಹೊಂದಲು ರಾಜಕಾರಣಿಗಳು ಮತ್ತು ಉನ್ನತ ಅಧಿಕಾರಿಗಳಿಗೆ ಲಕ್ಷಾಂತರ ರೂ ಹಣ ನೀಡಬೇಕಿದೆ. ಇದರಿಂದ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇಲಾಖೆಯ ಭ್ರಷ್ಟಾಚಾರದಿಂದ ಅವರ ನೈತಿಕತೆ ಕುಸಿಯುತ್ತಿದೆ. ಈ ಕಾರಣದಿಂದ ನಂದೀಶ್ ಸಾವಿನ ಕುರಿತು ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಮೈಸೂರು ಬಸವಣ್ಣ, ಚಂದ್ರಶೇಖರ್, ಲೋಕೇಶ್ ಕುಮಾರ್, ಹರೀಶ್, ರವಿ, ಮಹೇಂದ್ರ ಇದ್ದರು.
0 ಕಾಮೆಂಟ್‌ಗಳು