ಸರ್ಕಾರಗಳು ಜನ ಕಲ್ಯಾಣಕ್ಕೆ ಇರಬೇಕೇ ವಿನಹ ಜನರಿಗೆ ಕಂಟಕವಾಗಬಾರದು : ತನ್ವೀರ್ ಸೇಠ್
ಅಕ್ಟೋಬರ್ 12, 2022
ಸರ್ವಾಧಿಕಾರಿ ಧೋರಣೆ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ
ಮೈಸೂರು : ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗುವ ಕಾರ್ಯಕ್ರಮ ನೀಡಬೇಕೇ ಹೊರತು ವಿವಾದಗಳನ್ನು ಸೃಷ್ಟಿಸಬಾರದು ಎಂದು ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದರು. ಮೈಸೂರಿನಲ್ಲಿಂದು ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾವಣೆ ಉದ್ದೇಶ ಪೂರ್ವಕವಾಗಿಯೇ ಮಾಡಿದ್ದೇವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ವಿವಾದಕ್ಕೆ ಆಸ್ಪದ ನೀಡಲು ತಯಾರಿಲ್ಲ. ಜನರ ಮನಸ್ಸನ್ನು ಹಾಳು ಮಾಡುವುದು ತರವಲ್ಲ. ಹೆಸರು ಬದಲಾವಣೆಯಿಂದ ಲಾಭ ನಷ್ಟ ಜನ ತೀರ್ಮಾನ ಮಾಡುತ್ತಾರೆ ಎಂದರು. ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಜನಾಂಗಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿರುವ ೨ಬಿ ಮೀಸಲಾತಿಯನ್ನು ಆಡಳಿತರೂಢ ಬಿಜೆಪಿ ಸರ್ಕಾರ ರದ್ದು ಮಾಡಲು ಹೊರಟಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವ ಬಗ್ಗೆ ಉತ್ತರಿಸಿದ ತನ್ವೀರ್ ಸೇಠ್, ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದರು.
0 ಕಾಮೆಂಟ್‌ಗಳು