ಶಿವಪುರ ಸತ್ಯಾಗ್ರಹಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಕುವೆಂಪು, ಹುಯಿಲಗೊಳ ನಾರಾಯಣರಾವ್, ಡಾ.ಚನ್ನವೀರ ಕಣವಿ, ಡಾ.ಡಿ.ಎಸ್.ಕರ್ಕಿ, ಡಾ.ಹಂಸಲೇಖ ಅವರ ಗೀತೆಗಳ ಗಾಯನ

ವರದಿ-ಟಿ.ಬಿ.ಸಂತೋಷ, ಮದ್ದೂರು

ಮದ್ದೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಶಿವಪುರ ಧ್ವಜ ಸತ್ಯಾಗ್ರಹ ಸೌಧ ಆವರಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲ ಕೃಷ್ಣ, ಪೊಲೀಸ್ ವರಿμÁ್ಠಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್.ಹುಲ್ಮನಿ, ತಹಶೀಲ್ದಾರ್ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಉದಯ್ ಕುಮಾರ್ ಸೇರಿಂದಂತೆ ಇತರರು ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಂಡರು.
ನಾಡಿನ ಹೆಮ್ಮೆಯ ಕವಿಗಳು ರಚಿಸಿರುವ ನಾಡು ನುಡಿಯ ಬಗ್ಗೆ ಅಭಿಮಾನ, ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆಗಳು ಹಾಗೂ ಕವನಗಳನ್ನು ಕೋಟಿ ಕಂಠ ಗಾಯನದಲ್ಲಿ ಹಾಡಲಾಯಿತು.
ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೊಳ ನಾರಾಯಣರಾವ್ ರಚಿತ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವಾ’, ಡಾ.ಡಿ.ಎಸ್.ಕರ್ಕಿಯವರ ‘ಹಚ್ಛೇವು ಕನ್ನಡದ ದೀಪ’ ಹಾಗೂ ಡಾ.ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಆರು ಗೀತೆಗಳನ್ನು ಹಾಡಲಾಯಿತು.
ಗಾಯನದ ನಂತರ ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜು ಅವರು `ಕನ್ನಡ ನಾಡಿನ ಪ್ರಜೆಯಾಗಿ ನಾನು ನನ್ನ ನಾಡು, ನುಡಿಗಳನ್ನು, ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ನಾನು ಕನ್ನಡದಲ್ಲೇ ಮಾತನಾಡುತ್ತೇನೆ, ಕನ್ನಡದಲ್ಲೇ ಬರೆಯುತ್ತೇನೆ, ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ. ಕನ್ನಡ ನಾಡಿನಲ್ಲಿರುವ ಕನ್ನಡೇತರ ಬಂಧುಗಳಿಗೆ ಕನ್ನಡ ಕಲಿಸುತ್ತೇನೆ’ ಎಂದು ಸಂಕಲ್ಪ ವಿಧಿ ಬೋಧಿಸಿದರು

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು