ಮೈಸೂರು :ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ನಗರದ ಧನ್ವಂತರಿ ರಸ್ತೆಯಲ್ಲಿನ ಖಾದಿ ಎಂಪೋರಿಯಮ್ ಗೆ ಭೇಟಿ ಖಾದಿ ಬಟ್ಟೆಗಳನ್ನು ಖರೀದಿಸಿ ಸಾರ್ವಜನಿಕರಿಗೆ ವಿತರಿಸಿದರು.
ಗ್ರಾಮಸ್ವರಾಜ್ಯ ಹಾಗೂ ಸ್ವಾವಲಂಬಿ ಗ್ರಾಮಗಳ ಪರಿಕಲ್ಪನೆಯನ್ನು ಸಾಕಾರಗೊಳಿಸುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಹೀಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಿ, ಆರ್ಥಿಕ ಬಲ ತುಂಬಬೇಕು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.