ಭಾರಿ ಮಳೆಗೆ ಜೀವನಾವಶ್ಯಕ ವಸ್ತುಗಳು ನಾಶ
ವರದಿ-ಟಿ.ಸಿ.ಸಂತೋಷ, ಮದ್ದೂರು
ಮದ್ದೂರು : ತಾಲೂಕಿನಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕಾಡುಕೋತ್ತನಹಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದೆ.
ಗ್ರಾಮದ ಬಹುತೇಕ ಮನೆಗಳಿಗೆ ನೀರು ತುಂಬಿ ಗ್ರಾಮಸ್ಥರು ಪರದಾಡುವಂತೆ ಮಾಡಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಹಾಗೂ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.
ಗ್ರಾಮದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
0 ಕಾಮೆಂಟ್‌ಗಳು