ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ಯಶಸ್ವಿಯಾಗಿ ಜರುಗಿದ ಬೃಹತ್ ರಕ್ತದಾನ ಶಿಬಿರ

ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರವಕ್ಕೆ ತಹಶೀಲ್ದಾರ್ ನರಸಿಂಹಮೂರ್ತಿ ಸ್ವತಃ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು.  
ರಕ್ತದಾನ ಶಿಬಿರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಮದ್ದೂರು ತಾಲೋಕಿನ ವಿವಿಧ ಗ್ರಾಮಗಳ ಯುವಕರು ಉತ್ಸಾಹದಿಂದ ರಕ್ತದಾನ  ಮಾಡಿದರು.
ಇಂದು ಬೆಳಿಗ್ಗೆ ಶಾಸಕ ಶಾಸಕ ಡಿ.ಸಿ,ತಮ್ಮಣ್ಣ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಧ್ವಜಾರೋಹಣ ನೆರವೇರೆಸಿ ಮಹಾತ್ಮಾ ಗಾಂಧಿ ಹಾಗೂ  ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಇಬ್ಬರು ಮಹನೀಯರ ಜಯಂತಿ ಆಚರಿಸಿದರು.
ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಸಮಾಜ ಸೇವಕ ಕದಲೂರು ಉದಯ್, ಆರ್‍ಕೆ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ್ ಮುಂತಾದವರು ರಕ್ತದಾನ ಶಿಬಿರಕ್ಕೆ ಭೇಟಿ ನೀಡಿ ರಕ್ತದಾನಿಗಳಿಗೆ ಶುಭ ಕೋರಿದರು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು