ಅಪಘಾತಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ ಶಾಸಕ ಡಿ.ಸಿ.ತಮ್ಮಣ್ಣ
ಅಕ್ಟೋಬರ್ 13, 2022
ಶಾಸಕರ ಮಾನವೀಯತೆಗೆ ಮೆಚ್ಚುಗೆಯ ಮಹಾಪೂರ
ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ತಾಲೂಕಿನ ಕೆಸ್ತೂರು ಬಳಿ ಛತ್ರಲಿಂಗನದೊಡ್ಡಿ ಗೇಟ್ ಬಳಿ ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಶಾಸಕ ಡಿ.ಸಿ.ತಮ್ಮಣ್ಣ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು. ಮದ್ದೂರು ತಾಲ್ಲೂಕಿನ ಆತಗೂರು ಹೋಬಳಿಯ ಸಿದ್ದೇಗೌಡನದೊಡ್ಡಿ ಮರಿಯಪ್ಪ (೬೩) ಎಂಬುವವರು ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ಇದೇ ವೇಳೆ ಜನ ಸಂಪರ್ಕ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಡಿ.ಸಿ. ತಮ್ಮಣ್ಣ ಅವರಿಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ರೋಗಿಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಆಂಬುಲೆನ್ಸ್ ವಾಹನ ಬರಲು ತಡವಾದ ಕಾರಣ ತಕ್ಷಣ ತಮ್ಮ ಕಾರಿನಲ್ಲೇ ಸ್ಥಳೀಯ ಆಸ್ಪತ್ರೆಗೆ ತೆರಳಲು ಅನುಕೂಲ ಕಲ್ಪಿಸುವ ಪಾತ್ರರಾದರು.
0 ಕಾಮೆಂಟ್‌ಗಳು