ಕ್ರೀಡಾಕೂಟಕ್ಕೆ ಆಯ್ಕೆಯಾದ ಮಕ್ಕಳಿಗೆ ಉಡುಪು ನೀಡಿದ ಗ್ರಾಪಂ ಸದಸ್ಯ ಶಿವಕುಮಾರ್
ಅಕ್ಟೋಬರ್ 19, 2022
ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢ
ವರದಿ-ಶಾರುಕ್ ಖಾನ್, ಹನೂರು
ಹನೂರು : ಕ್ರೀಡೆಗಳು ದೇಹವನ್ನು ಸದೃಢವಾಗಿಡಲು ಸಹಕಾರಿಯಾಗುವುದರ ಜತೆಗೆ ಮನಸ್ಸಿನ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಗ್ರಾಪಂ ಸದಸ್ಯ ಶಿವಕುಮಾರ್ ಹೇಳಿದರು. ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕೌದಳ್ಳಿ ಪ್ರೌಡಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಉಡುಪು ನೀಡಿ ಪ್ರೋತ್ಸಾಹಿಸಿ ಮಾತನಾಡಿದರು. ಕ್ರೀಡೆ ಮನುಷ್ಯನ ಬದುಕಿನಲ್ಲಿ ಅತ್ಯಂತ ಪ್ರೋತ್ಸಾಹದಾಯಕ ಮತ್ತು ಸ್ಪೂರ್ತಿದಾಯಕ ಅಂಶವಾಗಿದೆ. ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡಿದರೆ ಮಾತ್ರ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಇಲ್ಲಿನ ಮಕ್ಕಳು ಉತ್ತಮವಾಗಿ ಅಭ್ಯಾಸ ಮಾಡಿ ಶಾಲೆಗೆ ಮತ್ತು ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು ಹರಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು ಇದ್ದರು.