ಜನ ಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ದೂರಿನ ಮಹಾಪೂರ : ತರಾಟೆಗೆ ತೆಗೆದುಕೊಂಡ ಶಾಸಕ ಡಿ.ಸಿ ತಮ್ಮಣ್ಣ
ಅಕ್ಟೋಬರ್ 28, 2022
ಸಾರ್ವಜನಿಕರ ಕೆಲಸಗಳನ್ನು ತುರ್ತಾಗಿ ಮಾಡುವಂತೆ ತಾಕೀತು
ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ಶಾಸಕ ಡಿ.ಸಿ.ತಮ್ಮಣ್ಣ ಶುಕ್ರವಾರ ಚಿಕ್ಕರಸಿನಕೆರೆ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಸಿದ ಜನ ಸಂಪರ್ಕ ಸಭೆಯಲ್ಲಿ ರೈತರು ಮತ್ತು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ದೂರುಗಳನ್ನು ಸಲ್ಲಿಸಿದರು. ತಾಲೂಕಿನ ಅರೆ ಚಾಕನಹಳ್ಳಿ, ಕರಡಕೆರೆ, ಕೆ.ಶೆಟ್ಟಹಳ್ಳಿ, ಹನುಮಂತನಗರ, ದೇವರಹಳ್ಳಿ, ಗೌಡಯ್ಯನದೊಡ್ಡಿ, ಮುಟ್ಟನಹಳ್ಳಿ, ಚಿಕ್ಕಬೋರೇಗೌಡನದೊಡ್ಡಿ ಮುಂತಾದ ಗ್ರಾಮಗಳಲ್ಲಿ ನಡೆಸಿದ ಜನಸಂಪರ್ಕ ಸಭೆಗಳಲ್ಲಿ ಸಾರ್ವಜನಿಕರು ತಮ್ಮ ಹಲವಾರು ಸಮಸ್ಯೆಗಳನ್ನು ಶಾಸಕರಿಗೆ ಹೇಳಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಶಾಸಕರು, ಗ್ರಾಮಸ್ಥರ ಮೂಲಭೂತ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ತಾಲೂಕು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ದೂರಿದರು. ಕೂಡಲೇ ಶಾಸಕರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜನ ಸಂಪರ್ಕ ಸಭೆಗೆ ಗೈರಾದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಮದ್ದೂರು ತಾಲೂಕಿನ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿ ನೀರಾವರಿ ಯೋಜನೆಗಳು, ರಸ್ತೆಗಳು, ಒಳ ಚರಂಡಿ ಕಾಮಗಾರಿಗಳು ಮತ್ತು ವಿದ್ಯುತ್ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮಾದನಾಯಕನಹಳ್ಳಿ ರಾಜಣ್ಣ, ಗುರುದೇವರಹಳ್ಳಿ ಅರವಿಂದ, ಮರಿಮಾದೇಗೌಡ, ಬಿಳಿಗೌಡ, ಆಸರೆ ರಘು ವೆಂಕಟೇಗೌಡ, ಕೆ.ಟಿ.ಸುರೇಶ್, ಕರಡಕೆರೆ ಯೋಗೇಶ್, ಚಿಕ್ಕರಸಿನಕರೆ ಮೂರ್ತಿ, ಕೆ.ಪಿ.ದೊಡ್ಡಿ ಸಿದ್ದರಾಜು, ಅಣ್ಣುರು ವಿನು, ಯೋಗೇಂದ್ರ, ನವಿನ್, ತಮ್ಮೇಗೌಡ, ಸಿದ್ದರಾಮು, ಶಿವಲಿಂಗಯ್ಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು