ಮೈಸೂರು ದಸರಾ : ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ
ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ, ಮಧ್ಯಾಹ್ನ ನಂದಿಪೂಜೆ, ಸಂಜೆ ಮೆರವಣಿಗೆ
ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆಯಲು ಉತ್ಸುಕರಾಗಿದ್ದಾರೆ.
ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನಡೆದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದೆ. ಅಂಬಾರಿಯಲ್ಲಿ ಪ್ರತಿμÁ್ಠಪನೆಯಾಗುವ ದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಂಜೆ 5.07ರಿಂದ 5.18ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುμÁ್ಪರ್ಚನೆ ಮಾಡಲಿದ್ದಾರೆ.
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಎ.ಸುನಿಲ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
25 ಸಾವಿರ ಆಸನ ವ್ಯವಸ್ಥೆ:
ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಶಾನಿ ಆನೆಗಳು, ಎನ್‍ಸಿಸಿ, ಸ್ಕೌಟ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕøತಿಯನ್ನು ಪ್ರತಿಬಿಂಬಿಸುವ 44 ಸ್ತಬ್ಧ ಚಿತ್ರಗಳು, 50ಕ್ಕೂ ಹೆಚ್ಚು ಕಲಾತಂಡಗಳು ಒಟ್ಟು 9ರಿಂದ 10 ಆನೆಗಳು ಜಂಬೂಸವಾರಿಗೆ ಸಾಥ್ ನೀಡಲಿವೆ. ಅರಮನೆಯೊಳಗೆ 25 ಸಾವಿರ ಮಂದಿಗೆ ಆಸನ ವ್ಯವಸ್ಥೆ ಹಾಗೂ ಅಂಬಾರಿ ಸಾಗುವ ಎರಡೂ ಬದಿಯಲ್ಲಿ ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ. ಅಂದು ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ನಂತರ ಬಗೆಬಗೆಯ ಸಾಹಸ ಪ್ರದರ್ಶನ ನಡೆಯಲಿದೆ. ಆ ಮೂಲಕ ಹತ್ತು ದಿನ ದಸರಾ ಮಹೋತ್ಸವಕ್ಕೆ ತೆರೆಬೀಳಲಿದೆ.
9ರಿಂದ 10 ಆನೆಗಳು ಭಾಗಿ:
ಎಲ್ಲಾ ಆನೆಗಳು ಆರೋಗ್ಯವಾಗಿದ್ದು, 9ರಿಂದ 10 ಆನೆಗಳು ಜಂಬೂಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಈ ಬಾರಿ ಸಂಜೆ ಜಂಬೂಸವಾರಿ ಹೊರಡುವ ಹಿನ್ನೆಲೆಯಲ್ಲಿ ಬನ್ನಿಮಂಟಪ ತಲುಪಲು ಗಜಪಡೆಗೆ ಹೆಚ್ಚು ಸಮಯ ಬೇಕಾಗಬಹುದು. ಸ್ತಬ್ಧಚಿತ್ರ ಹಾಗೂ ಕಲಾತಂಡಗಳು ಇರುವುದರಿಂದ 9ರಿಂದ 10 ಆನೆಗಳನ್ನು ಮಾತ್ರ ಮೆರವಣಿಗೆಗೆ ಬಳಲಾಸಲಾಗುತ್ತಿದೆ.
ಅಂಬಾರಿ ಹೊರುವ ಅಭಿಮನ್ಯು :
"ಅಭಿಮನ್ಯು ಅಂಬಾರಿ ಹೊತ್ತರೆ, ಚೈತ್ರಾ ಹಾಗೂ ಕಾವೇರಿ ಕುಮ್ಮಿ ಆನೆಗಳಾಗಿ ಮೆರವಣಿಗೆಯಲ್ಲಿ ಸಾಗಲಿವೆ. ಅರ್ಜುನ ನಿಶಾನೆ ಯಾದರೆ, ನೌತ್ ಆನೆಯಾಗಿ ಮಹೇಂದ್ರ, ಸಾಲಾನೆಯಾಗಿ ಭೀಮ, ಗೋಪಾಲಸ್ವಾಮಿ ಹಾಗೂ ಧನಂಜಯ್, ಗೋಪಿ ಹೆಜ್ಜೆಹಾಕಲಿವೆ. ಕೊನೆಗಳಿಗೆಯಲ್ಲಿ ವಿಜಯ್ ಕೂಡ ಟೀಂ ಸೇರಬಹುದು. ಎಂದು ಡಿಸಿಎಫ್ ಕರಿಕಾಳನ್ ತಿಳಿಸಿದ್ದಾರೆ.
0 ಕಾಮೆಂಟ್‌ಗಳು