ಹನೂರು : ಜನಸಂಕಲ್ಪ ಯಾತ್ರೆ ಯಶಸ್ವಿಗೊಳಿಸಲು ಬಿಜೆಪಿ ಮುಖಂಡರ ಕರೆ
ಅಕ್ಟೋಬರ್ 27, 2022
ವರದಿ-ಶಾರುಕ್ ಖಾನ್, ಹನೂರು
ಹನೂರು : ನಾಳೆ ಪಟ್ಟಣದಲ್ಲಿ ಏರ್ಪಡಿಸಿರುವ ಜನಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಮುಖಂಡರು ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಪಕ್ಷ ಸಂಘಟನೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾದನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಮಂಗಲ ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ನಾಯಕರು ಸ್ಥಳೀಯ ಹಿಂದುಳಿದ ವರ್ಗದ ಮುಖಂಡರ ಜೊತೆಯಲ್ಲಿ ಸಂವಾದ ನಡೆಸಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವರು. ನಂತರ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವೇದಿಕೆಯಲ್ಲಿ ಬಿಎಲ್‍ಎ-2 ಮಾಹಿತಿ ಹಂಚಿಕೆ ಕಾರ್ಯಕ್ರಮದ ಬಗ್ಗೆ ಸಭೆ ಮಾಡುವರು ಎಂದರು. ರಾಜ್ಯದ ನಾಯಕರುಗಳನ್ನು ಮೂರು ಭಾಗವಾಗಿ ವಿಭಜಿಸಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಸಹ ಈ ಕಾರ್ಯಕ್ರಮ ಮುಗಿದ ನಂತರ ಹನೂರಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವುದು ಹಾಗೂ ಸರ್ಕಾರದ ನೂರತ್ತೊಂಬತ್ತೆಂಟು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮುಂದಿನ ಚುನಾವಣೆಗೆ ತಯಾರಿ ನಡೆಸಲು ಎಲ್ಲಾ ಕಾರ್ಯಕರ್ತರಿಗೆ ತರಬೇತಿ ನೀಡುವುದು ಈ ಕಾರ್ಯಕ್ರಮದ ಉದ್ಧೇಶವಾಗಿದೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿದ್ದರಾಜು, ರವಿಶಂಕರ್, ಡಾ.ಪ್ರೀತಮ್, ಬಿಜೆಪಿ ಜಿಲ್ಲಾ ಉಪಾದ್ಯಕ್ಷರಾದ ದತ್ತೇಶ್ ಕುಮಾರ್, ಒಬಿಸಿ ಜಿಲ್ಲಾ ಮೋರ್ಚದ ಜನದ್ವನಿ ವೆಂಕಟೇಶ್ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.
0 ಕಾಮೆಂಟ್‌ಗಳು