ವರದಿ-ನಜೀರ್ ಅಹಮದ್ಪಾಂಡವಪುರ : ಗಾಂಧಿ ಜಯಂತಿ ಹಾಗೂ ಸೇವಾ ಪಾಕ್ಷಿಕ ಪ್ರಯುಕ್ತ ತಾಲ್ಲೂಕಿನ ಬಿಜೆಪಿ ಮುಖಂಡ ಹಾಗೂ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಮೇಲುಕೋಟೆಯಲ್ಲಿನ ಖಾದಿ ಭಂಡಾರಕ್ಕೆ ಭಾನುವಾರ ಭೇಟಿ ಖಾದಿ ಬಟ್ಟೆಗಳನ್ನು ಖರೀದಿಸಿ ಸಾರ್ವಜನಿಕರಿಗೆ ವಿತರಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮ ಸ್ವರಾಜ್ಯ ಹಾಗೂ ಸ್ವಾವಲಂಬಿ ಗ್ರಾಮಗಳ ಪರಿಕಲ್ಪನೆಯನ್ನು ಸಾಕಾರಗೊಳಿಸುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಹೀಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಿ, ಆರ್ಥಿಕ ಬಲ ತುಂಬಬೇಕು ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಸ್‍ಎನ್‍ಟಿ ಸೋಮಶೇಖರ್ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು ಹಾಜರಿದ್ದರು
ಪಾಂಡವಪುರ : ಗಾಂಧಿ ಜಯಂತಿ ಹಾಗೂ ಸೇವಾ ಪಾಕ್ಷಿಕ ಪ್ರಯುಕ್ತ ತಾಲ್ಲೂಕಿನ ಬಿಜೆಪಿ ಮುಖಂಡ ಹಾಗೂ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಮೇಲುಕೋಟೆಯಲ್ಲಿನ ಖಾದಿ ಭಂಡಾರಕ್ಕೆ ಭಾನುವಾರ ಭೇಟಿ ಖಾದಿ ಬಟ್ಟೆಗಳನ್ನು ಖರೀದಿಸಿ ಸಾರ್ವಜನಿಕರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮ ಸ್ವರಾಜ್ಯ ಹಾಗೂ ಸ್ವಾವಲಂಬಿ ಗ್ರಾಮಗಳ ಪರಿಕಲ್ಪನೆಯನ್ನು ಸಾಕಾರಗೊಳಿಸುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಹೀಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಿ, ಆರ್ಥಿಕ ಬಲ ತುಂಬಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಸ್‍ಎನ್‍ಟಿ ಸೋಮಶೇಖರ್ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು ಹಾಜರಿದ್ದರು
0 ಕಾಮೆಂಟ್‌ಗಳು