ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ಅಂಗಾಗ ದಾನದಿಂದ 9 ಮಂದಿಯ ಜೀವ ರಕ್ಷಣೆ


 ಮೈಸೂರು : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿ ಸಾವಿನ ಮನೆಯಲ್ಲಿ ಸಾರ್ಥಕತೆ ಮರೆದಿದ್ದಾರೆ. 
ಇಲ್ಲಿನ ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್(25) ಅ.5 ರಂದು ಸಿದ್ದಾರ್ಥ ಬಡಾವಣೆಯಲ್ಲಿ ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗೆ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಮದನ್ ಕುಮಾರ್‍ನನ್ನು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಮೆದುಳು ನಿಷ್ಕ್ರಿಯವಾಗಿರುವುದನ್ನು ಗಮನಿಸಿದ ಆಸ್ಪತ್ರೆ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು.
ನಂತರ ಕುಟುಂಬದವರ ಒಪ್ಪಿಗೆ ಮೇರೆಗೆ ಮೃತನ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ಆಸ್ಪತ್ರೆಯ ವೈದ್ಯರು ಉಳಿಸಿದ್ದಾರೆ.