ಗ್ರಾಮಸ್ಥರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಮೆಚ್ಚುಗೆಗೆ ಪಾತ್ರರಾದ ಶಾಸಕ ಡಿ.ಸಿ.ತಮ್ಮಣ್ಣ
ಅಕ್ಟೋಬರ್ 13, 2022
ಕೆಸ್ತೂರಿನಲ್ಲಿ ಜನಸಂಪರ್ಕ ಸಭೆ : ಅಹವಾಲು ಸ್ವೀಕಾರ
ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೂ ಮುನ್ನ ಅವರು, ಗೋಲ್ಲರದೊಡ್ಡಿಯ ಶ್ರೀ ಜುಂಜಪ್ಪ ಸ್ವಾಮಿಯ ದೇವಾಲಯಕ್ಕೆ ಪೂಜೆ ಸಲ್ಲಿಸುವ ಮೂಲಕ ಜನ ಸಂಪರ್ಕ ಸಭೆಗೆ ಚಾಲನೆ ನೀಡಿದರು. ನಂತರ ಛತ್ರ ಲಿಂಗನದೊಡ್ಡಿ, ಕುಂದನಕುಪ್ಪೆ, ಮಲ್ಲನಾಯ್ಕನಹಳ್ಳಿ, ಸಿದ್ದೇಗೌಡನದೊಡ್ಡಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಟರಿಂದ ಅಹವಾಲು ಸ್ವೀಕರಿಸಿದರಲ್ಲದೇ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಟ್ಟು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರದಾದರು. ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಬಿ.ಬಿಳೀಗೌಡ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಹೂತಗರೆ ಗ್ರಾಪಂ ಅಧ್ಯಕ್ಷ ರವಿಕುಮಾರ್, ಜೆಡಿಎಸ್ ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಶಂಕರ್, ಹೂತಗರೆ ಬೆಟ್ಟಸ್ವಾಮಿ, ಗ್ರಾಪಂ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು..
0 ಕಾಮೆಂಟ್‌ಗಳು