ಮೈಸೂರು ದಸರಾ : ಚಾಮುಂಡಿಬೆಟ್ಟ ಹತ್ತುವ ಸ್ಪರ್ಧೆಗೆ ಚಾಲನೆ

 ಮೈಸೂರು : ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಯುಕ್ತ ಚಾಮುಂಡಿಬೆಟ್ಟ ಹತ್ತುವ ಸ್ಪರ್ಧೆಗೆ ಅಪರ ಮುಖ್ಯ ಕಾರ್ಯದರ್ಶಿ  ಡಾ.ಶಾಲಿನಿ ರಜನಿಶ್ ಹಾಗೂ ಸಾಹಸ ಕ್ರೀಡಾ ಉಪ ಸಮಿತಿ ಅಧ್ಯಕ್ಷರಾದ ಕುಂಬರಳ್ಳಿ ಸುಬ್ಬಣ್ಣ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸ್ಪರ್ಧೆಯಲ್ಲಿ ಮಹಿಳೆಯರೂ ಸೇರಿದಂತೆ ೧೫೦ ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉಪ ಸಮಿತಿ ಉಪಾಧ್ಯಕ್ಷ ಶಿವರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಹಿತ್ ಗಂಗಾಧರ್ ಇನ್ನಿತರರು ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು