ರಾಹುಲ್‌ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಗೆ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟದ ಬೆಂಬಲ : ಗುರುಪ್ರಸಾದ್ ಕೆರೆಗೂಡು
ಅಕ್ಟೋಬರ್ 03, 2022
ಮಂಡ್ಯ : ರಾಹುಲ್‌ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಗೆ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
ಪಾದಯಾತ್ರೆ ಸಾಗುವ ಎಲ್ಲಾ ಸ್ಥಳಗಳಲ್ಲಿ ಆಯಾ ತಾಲ್ಲೂಕು, ಹೋಬಳಿ ಗ್ರಾಮಗಳಲ್ಲಿರುವ ದಸಂಸ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಬೆಂಬಲ ನೀಡುವುದಾಗಿ ದಸಂಸ ಹಿರಿಯ ಹೋರಾಟಗಾರ ಗುರುಪ್ರಸಾದ್ ಕೆರೆಗೂಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿಗಳ ಆಡಳಿತ ನಡೆಯುತ್ತಿದೆ. ಇವರನ್ನು ಪ್ರಶ್ನಿಸುವಂತಿಲ್ಲ, ಪ್ರಭುತ್ವದ ಜನವಿರೋಧಿ ನೀತಿಗಳನ್ನು ಪ್ರಶ್ನಿಸಿದವರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಜೈಲಿಗಟ್ಟಲಾಗುತ್ತಿದೆ, ಸಂಸತ್ತು ಸದನದಲ್ಲಿ ದನಿ ಎತ್ತುವ ಪ್ರತಿಪಕ್ಷಗಳನ್ನು ಹತ್ತಿಕ್ಕಲಾಗುತ್ತಿದೆ, ವಿರೋಧ ಪಕ್ಷಗಳಿಲ್ಲದ ಆಡಳಿತ ಪಕ್ಷವಿರಬೇಕೆನ್ನುವುದು ಇಂದಿನ ಪ್ರಭುತ್ವದ ನೀತಿಯಾಗಿದೆ. ಇದು ಜನತಂತ್ರ ವ್ಯವಸ್ಥೆಗೆ ಮಾರಕವಾದುದ್ದಾಗಿದೆ.
ಈ ಹಿನ್ನೆಲೆಯಲ್ಲಿ ಸೆ.೨೮ರಂದು ಬೆಂಗಳೂರಿನಲ್ಲಿ ನಡೆದ ದಸಂಸ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದ ಹಲವಾರು ದಸಂಸ ಸಂಘಟನೆಗಳು ಸಲಹೆ ಮೇರೆಗೆ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿತ್ತು ಎಂದು ಗುರುಪ್ರಸಾದ್ ತಿಳಿಸಿದ್ದಾರೆ.
0 ಕಾಮೆಂಟ್‌ಗಳು