ಸಿದ್ದಗಂಗಾ ಶಾಖಾ ಮಠವಾದ ಕುಂಚಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ವರದಿ-ಮಾಗಡಿ ಸಿದ್ದಲಿಂಗಪ್ಪ

ಮಾಗಡಿ : ಸಿದ್ದಗಂಗಾ ಶಾಖಾ ಮಠವಾದ ಕುಂಚಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುಂಚಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದು, ಅವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. 
2021ರ ಡಿಸೆಂಬರ್ 20ರಂದು ಚಿಲುಮೆ ಮಠದ ಬಸವಲಿಂಗ ಸ್ವಾಮಿಗಳು ಮಠದ ಗೋಡೆಗೆ ಅಳವಡಿಸಿದ್ದ ಕಬ್ಬಿಣದ ಗ್ರಿಲ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮತ್ತೊಬ್ಬ ಸ್ವಾಮೀಜಿ ಸಾವಿಗೆ ಶರಣಾಗಿದ್ದಾರೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು